ನಾಳೆ ಸಿಎಂ ಅಭಿನಂದನಾ ಸಮಾರಂಭ: ಸಿದ್ಧತಾ ಕಾರ್ಯ ಪರಿಶೀಲಿಸಿದ ಬಿಎಸ್ವೈ ಪುತ್ರರು - ನಾಳೆ ಸಿಎಂ ಅಭಿನಂದನಾ ಸಮಾರಂಭ
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ 78 ನೇ ಹುಟ್ಟುಹಬ್ಬದ ನಿಮಿತ್ತ ಅಭಿನಂದನಾ ಸಮಾರಂಭವನ್ನು ಆಯೋಜನೆ ಮಾಡಲಾಗಿದ್ದು,ನೂತನ ಸಚಿವ ನಾರಾಯಣಗೌಡ ಸಮಾರಂಭದ ಆಯೋಜನೆಯಲ್ಲಿ ಮುಖ್ಯ ಪಾತ್ರ ವಹಿಸಿದ್ದು, ಸಿಎಂ ಪುತ್ರರಾದ ಸಂಸದ ಬಿ.ವೈ ರಾಘವೇಂದ್ರ, ಬಿ.ವೈ ವಿಜಯೇಂದ್ರ ಅರಮನೆ ಮೈದಾನದ ವೈಟ್ ಪೆಟಲ್ಸ್ನಲ್ಲಿ ನಡೆಯುತ್ತಿರುವ ಸಿದ್ಧತಾ ಕಾರ್ಯ ಪರಿಶೀಲಿಸಿ, ಬಳಿಕ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರ ಜೊತೆ ಸಭೆ ನಡೆಸಿದರು. ಸಭೆಯಲ್ಲಿ ಸಚಿವ ನಾರಾಯಣಗೌಡ, ಪರಿಷತ್ ಸದಸ್ಯ ಲೆಹರ್ ಸಿಂಗ್, ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಸೇರಿದಂತೆ ಹಲವರು ಭಾಗಿಯಾಗಿದ್ದರು.