ಕಲ್ಪತರು ನಾಡಲ್ಲಿ 1885 ಮಂದಿ ಕ್ವಾರಂಟೈನ್ - covid19 report
ತುಮಕೂರು: ಕೋವಿಡ್-19 ಸೋಂಕು ತಡೆಗಟ್ಟುವ ಹಿನ್ನೆಲೆ ಜಿಲ್ಲೆಯಲ್ಲಿ 1879 ಮಂದಿಯನ್ನು ಕ್ವಾರಂಟೈನ್ನಲ್ಲಿ ಇಡಲಾಗಿದೆ. 729 ಮಂದಿಯನ್ನು ಶಂಕಿತರೆಂದು ಗುರುತಿಸಿ ಜಿಲ್ಲಾ ಆಸ್ಪತ್ರೆಯಲ್ಲಿ ಐಸೋಲೋಷನ್ನಲ್ಲಿ ಇರಿಸಲಾಗಿದೆ. ಇದುವರೆಗೂ ಜಿಲ್ಲೆಯಾದ್ಯಂತ 5271 ಜನರ ಸ್ಯಾಂಪಲ್ಗಳನ್ನು ಪಡೆಯಲಾಗಿದೆ. ಅದ್ರಲ್ಲಿ 4296 ಮಂದಿಯಲ್ಲಿ ನೆಗೆಟಿವ್ ಬಂದಿದೆ. 926 ಮಂದಿಯ ಸ್ಯಾಂಪಲ್ಗಳ ವರದಿ ಬರಬೇಕಿದೆ. 38 ಜನರ ಸ್ಯಾಂಪಲ್ ವರದಿಯನ್ನು ತಿರಸ್ಕರಿಸಿ ಪುನಃ ಪರೀಕ್ಷೆಗೆ ಕಳುಹಿಸಲಾಗಿದೆ. ಇದುವರೆಗೂ ಜಿಲ್ಲೆಯಲ್ಲಿ 11 ಮಂದಿಯಲ್ಲಿ ಕೋವಿಡ್-19 ಸೋಂಕು ಕಂಡುಬಂದಿದೆ. ಇಬ್ಬರು ಮೃತಪಟ್ಟಿದ್ದಾರೆ. ಇಬ್ಬರು ಗುಣಮುಖರಾಗಿದ್ದಾರೆ. ಏಳು ಮಂದಿಗೆ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.