ಕೃಷಿ ಕಾಯ್ದೆ ವಿರೋಧಿಸಿ ಟ್ರ್ಯಾಕ್ಟರ್ ಪರೇಡ್: ತಹಶೀಲ್ದಾರ್ ಮೂಲಕ ಪ್ರಧಾನಿಗೆ ಮನವಿ ಸಲ್ಲಿಕೆ - ಟ್ರ್ಯಾಕ್ಟರ್ ಪರೇಡ್
ಹಾವೇರಿ/ದಾವಣಗೆರೆ: ಕೇಂದ್ರ ಬಿಜೆಪಿ ಸರ್ಕಾರ ತಂದಿರುವ ಮೂರು ಕೃಷಿ ಕಾಯ್ದೆಗಳ ವಿರುದ್ಧ ದಾವಣಗೆರೆ ಹಾಗೂ ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನಲ್ಲಿ ವಿವಿಧ ರೈತ ಸಂಘಟನೆಗಳು ಮತ್ತು ಕಾಂಗ್ರೆಸ್ ಪಕ್ಷದಿಂದ ಟ್ರ್ಯಾಕ್ಟರ್ ಪರೇಡ್ ನಡೆಸಲಾಯಿತು. ರಾಣೆಬೆನ್ನೂರು ನಗರದ ಮಾಗೋಡ ಕ್ರಾಸ್ನಿಂದ ಆರಂಭದವಾದ ಟ್ರ್ಯಾಕ್ಟರ್ ಪರೇಡ್ ಸುಮಾರು ಮೂರು ಕಿ.ಮೀ. ಚಲಿಸಿ ತಹಶೀಲ್ದಾರ ಕಚೇರಿಗೆ ತೆರಳಿತು. ವಿವಿಧ ಸಂಘಟನೆ ಮುಖಂಡರು ತಹಶೀಲ್ದಾರ್ ಶಂಕರ ಜಿ.ಎನ್. ಮೂಲಕ ಪ್ರಧಾನಿ ಮಂತ್ರಿಗಳಿಗೆ ಮನವಿ ಸಲ್ಲಿಸಿದರು. ದಾವಣಗೆರೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ನಡೆಯುತ್ತಿರುವ ಟ್ರ್ಯಾಕ್ಟರ್ ಪರೇಡ್ನಲ್ಲಿ ನೂರಕ್ಕೂ ಹೆಚ್ಚು ಟ್ರ್ಯಾಕ್ಟರ್ಗಳೊಂದಿಗೆ ರೈತರು ಬೀದಿಗಿಳಿದು ಪ್ರತಿಭಟನೆ ನಡೆಸಿದರು.