ಯಾದಗಿರಿಯಲ್ಲೂ ಟ್ರ್ಯಾಕ್ಟರ್ ಪರೇಡ್... ರೈತರ ಪ್ರತಿಭಟನೆಗೆ ಬೆಂಬಲ
ಯಾದಗಿರಿ: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ದೆಹಲಿಯಲ್ಲಿ ನಡೆಯುತ್ತಿರುವ ರೈತರ ಟ್ರ್ಯಾಕ್ಟರ್ ಪರೇಡ್ಗೆ ಯಾದಗಿರಿಯಲ್ಲಿಯೂ ಬೆಂಬಲ ವ್ಯಕ್ತವಾಗಿದೆ. ಟ್ರ್ಯಾಕ್ಟರ್, ಟೆಂಪೋಗಳ ಮೂಲಕ ಪರೇಡ್ ನಡೆಸಿ ಪ್ರತಿಭಟನೆ ನಡೆಸಲಾಯಿತು. ವಡಿಗೇರಾ ಕ್ರಾಸ್ನಿಂದ ಸುಭಾಷ್ ವೃತ್ತದವರೆಗೆ ಪ್ರತಿಭಟನಾ ರ್ಯಾಲಿ ನಡೆಸಲಾಯಿತು. ಸುಮಾರು ಐವತ್ತಕ್ಕೂ ಹೆಚ್ಚು ಟ್ರ್ಯಾಕ್ಟರ್ಗಳಲ್ಲಿ ರೈತರು ಪರೇಡ್ ನಡೆಸಿದರು. ಪೊಲೀಸ್ ಬಿಗಿ ಭದ್ರತೆಯಲ್ಲಿ ಟ್ರ್ಯಾಕ್ಟರ್ ಪರೇಡ್ ನಡೆಸುವ ಮೂಲಕ ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಗೆ ಕಾರ್ಮಿಕ ಮತ್ತು ಆಟೋ ಚಾಲಕರ ಸಂಘಟನೆಗಳು ಬೆಂಬಲ ನೀಡಿದವು.