ಟ್ರ್ಯಾಕ್ಟರ್ ಱಲಿಗೆ ತಡೆ: ರೈತರು-ಪೊಲೀಸರ ನಡುವೆ ಮಾತಿನ ಚಕಮಕಿ - ದೊಡ್ಡಬಳ್ಳಾಪುರ ನಗರದ ಎಪಿಎಂಸಿ ಮಾರುಕಟ್ಟೆ
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆ ತಿದ್ದುಪಡಿ ವಿರೋಧಿಸಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರೈತರು ಟ್ರ್ಯಾಕ್ಟರ್ ಱಲಿ ನಡೆಸಲು ಮುಂದಾಗಿದ್ದಾರೆ. ಬೆಂಗಳೂರಿನಲ್ಲಿ ನಡೆಯುವ ಟ್ರ್ಯಾಕ್ಟರ್ ಱಲಿಗೆ ಹೋಗಲು ಮುಂದಾದಾಗ, ಪೊಲೀಸರು ಟ್ರ್ಯಾಕ್ಟರ್‌ಗಳನ್ನ ತಡೆದಿದ್ದು, ಈ ಸಮಯದಲ್ಲಿ ರೈತರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ಸಹ ನಡೆಯಿತು. ದೊಡ್ಡಬಳ್ಳಾಪುರ ನಗರದ ಎಪಿಎಂಸಿ ಮಾರುಕಟ್ಟೆ ಮುಂದೆಯೇ ಪ್ರತಿಭಟನೆ ನಡೆಸಿದರು. ಶಾಸಕ ಟಿ.ವೆಂಕಟರಮಣಯ್ಯ ರೈತರ ಪ್ರತಿಭಟನೆಯಲ್ಲಿ ಭಾಗಿಯಾಗುವ ಮೂಲಕ ಹೋರಾಟಕ್ಕೆ ಬೆಂಬಲ ಸೂಚಿಸಿದರು. ರಾಜ್ಯ ಸರ್ಕಾರ ಪೊಲೀಸ್ ಬಲ ಪ್ರಯೋಗದ ಮೂಲಕ ರೈತರ ಹೋರಾಟ ಹತ್ತಿಕ್ಕುವ ಪ್ರಯತ್ನ ನಡೆಸಿದೆ. ಮುಂದಿನ ದಿನಗಳಲ್ಲಿ ಕೃಷಿ ಕಾಯ್ದೆ ವಿರುದ್ಧ ಉಗ್ರ ಹೋರಾಟ ನಡೆಯಲಿದೆ ಎಚ್ಚರಿಕೆ ರವಾನಿಸಿದರು.