ಟ್ರ್ಯಾಕ್ಟರ್ ಪಲ್ಟಿ: ಓರ್ವ ಸ್ಥಳದಲ್ಲೇ ಸಾವು, ಮೂವರಿಗೆ ಗಂಭೀರ ಗಾಯ - ಹಾವೇರಿ ದೂಪದಹಳ್ಳಿ ಟ್ರಾಕ್ಟರ್ ಪಲ್ಟಿ ಸುದ್ದಿ
ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿಯಾದ ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನ ದೂಪದಹಳ್ಳಿ ಗ್ರಾಮದ ಬಳಿ ನಡೆದಿದೆ. ಮೃತ ವ್ಯಕ್ತಿಯನ್ನ (45) ನಾಗಪ್ಪ ಬೆಳಕೇರಿ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಗಾಯಗೊಂಡಿದ್ದ ಮೂವರು ಗಾಯಾಳುಗಳನ್ನ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹಿರೇಕೆರೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.