ಅತ್ಯಾಚಾರಿಗಳ ಹುಟ್ಟಡಗಿಸಿದ ಸಜ್ಜನರ್ಗೆ ಹುಟ್ಟೂರಲ್ಲಿ ಗೌರವ: ಭಾವಚಿತ್ರ ಮೆರವಣಿಗೆ ಮಾಡಿ ಗ್ರಾಮಸ್ಥರ ಸಂಭ್ರಮ - Tribute to Vishwanath Sajjanar from the Asoti Villagers
ಗದಗ: ಹೈದರಾಬಾದ್ ಪಶುವೈದ್ಯೆ ಅತ್ಯಾಚಾರ, ಕೊಲೆ ಆರೋಪಿಗಳನ್ನು ಎನ್ಕೌಂಟರ್ ಮಾಡಿರುವ ಪೊಲೀಸ್ ಅಧಿಕಾರಿ ವಿಶ್ವನಾಥ್ ಸಜ್ಜನರ್ಗೆ ಅಭಿನಂದನೆಗಳ ಮಹಾಪೂರವೇ ಹರಿದು ಬಂದಿದ್ದು, ಹುಟ್ಟೂರು ಗದಗ ಜಿಲ್ಲೆ ರೋಣ ತಾಲೂಕಿನ ಅಸೂಟಿ ಗ್ರಾಮದಲ್ಲಿ ಅಭಿನಂದನಾ ಮೆರವಣಿಗೆ ನಡೆಯಿತು. ಗ್ರಾಮಸ್ಥರೆಲ್ಲ ಸೇರಿ ವಿಶ್ವನಾಥ್ ಅವರ ಭಾವಚಿತ್ರದ ಮೆರವಣಿಗೆ ಮಾಡಿ, ಪರಸ್ಪರ ಬಣ್ಣ ಎರಚಿಕೊಂಡು ಸಂಭ್ರಮಿಸಿದ್ದಾರೆ.