ಮೈಲಾರಲಿಂಗೇಶ್ವರ ದೇಗುಲಕ್ಕೆ ಭಕ್ತರು ಬರಬೇಡಿ ; ಧರ್ಮದರ್ಶಿ ವೆಂಕಪ್ಪಯ್ಯ ಒಡೆಯರ್ ಮನವಿ - ಮೈಲಾರ ಲಿಂಗೇಶ್ವರ ದೇಗುಲ
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣ ಹೆಚ್ಚಾಗುತ್ತಿವೆ. ಈ ಹಿನ್ನೆಲೆ ಬಳ್ಳಾರಿ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಮೈಲಾರ ಗ್ರಾಮದ ಮೈಲಾರ ಲಿಂಗೇಶ್ವರ ದೇಗುಲಕ್ಕೆ ಭಕ್ತರು ಬರಬೇಡಿ ಎಂದು ದೇಗುಲದ ಧರ್ಮದರ್ಶಿ ವೆಂಕಪ್ಪಯ್ಯ ಒಡೆಯರ್ ಮನವಿ ಮಾಡಿದ್ದಾರೆ. ಐತಿಹಾಸಿಕ ಪ್ರಸಿದ್ಧ ಸುಕ್ಷೇತ್ರ ಮೈಲಾರಲಿಂಗೇಶ್ವರ ದೇವರಿಗೆ ನೆರೆಯ ಮಹಾರಾಷ್ಟ್ರ, ಆಂಧ್ರ ಹಾಗೂ ಬೆಂಗಳೂರು ಸೇರಿ ಲಕ್ಷಾಂತರ ಭಕ್ತರಿದ್ದಾರೆ. ಕೊರೊನಾ ವ್ಯಾಪಕವಾಗುತ್ತಿರುವುದರಿಂದ ದೇವರ ದರ್ಶನಕ್ಕೆ ನಿಷೇಧ ಹೇರಲಾಗಿದೆ. ಭಕ್ತರು ಸಹಕರಿಸುವಂತೆ ಅವರು ಕೋರಿದ್ದಾರೆ.