ಬೋನಿಗೆ ಬಿದ್ದ ಚಿರತೆ: ನಿಟ್ಟುಸಿರು ಬಿಟ್ಟ ಹುಳಿಯಾರು ಗ್ರಾಮಸ್ಥರು - ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಸುತ್ತಮುತ್ತಲ ಪ್ರದೇಶದಲ್ಲಿ ಹಲವು ದಿನಗಳಿಂದ ಜಾನುವಾರುಗಳನ್ನು ಕೊಂದು ಭೀತಿ ಮೂಡಿಸಿದ್ದ ಚಿರತೆ ಬೋನಿಗೆ ಬಿದ್ದಿದೆ. ಹುಳಿಯಾರು ಸಮೀಪದ ಯಳನಾಡುವಿನ ಕಾಚನಕಟ್ಟೆ, ಗಂಗಮ್ಮನ ಕೆರೆ ಸುತ್ತಮುತ್ತ ಸಾರ್ವಜನಿಕವಾಗಿ ಕಾಣಿಸಿಕೊಳ್ಳುತ್ತಿದ್ದ ಚಿರತೆ ಗ್ರಾಮಸ್ಥರಲ್ಲಿ ಭೀತಿ ಉಂಟು ಮಾಡಿತ್ತು. ಗ್ರಾಮಸ್ಥರ ಒತ್ತಾಯದ ಮೇರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಸೆರೆ ಹಿಡಿಯಲು ಬೋನು ಇರಿಸಿದ್ದು, ಇಂದು ಮುಂಜಾನೆ ಬೋನಿಗೆ ಬಿದ್ದಿದೆ.