ತುಮಕೂರು: ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಈಗಾಗಲೇ ಆನ್ಲೈನ್ನಲ್ಲಿ ಸಂಪೂರ್ಣ ಪಾಠ ಪ್ರವಚನಗಳು ಪೂರ್ಣಗೊಂಡಿದೆ. ಹೀಗಾಗಿ ಪರೀಕ್ಷೆಗಳನ್ನು ನಡೆಸಬೇಕೆಂದು ಇಂಜಿನಿಯರ್ ಕಾಲೇಜು ವಿದ್ಯಾರ್ಥಿಗಳು ಮತ್ತು ಪೋಷಕರು ಹಾಗೂ ಆಡಳಿತ ಮಂಡಳಿಗಳು ಸರ್ಕಾರವನ್ನು ಒತ್ತಾಯಿಸುತ್ತಿದೆ. ಈಗಾಗಲೇ 90 ರಷ್ಟು ವಿದ್ಯಾರ್ಥಿಗಳು ಆನ್ಲೈನ್ ಪಾಠ ಪ್ರವಚನಗಳಿಗೆ ಹಾಜರಾಗಿದ್ದಾರೆ. ಯಾವುದೇ ರೀತಿಯ ಗೊಂದಲಗಳಿಲ್ಲದೆ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಸಿದ್ಧರಾಗಿದ್ದಾರೆ ಎನ್ನುತ್ತಾರೆ ಬೋಧಕರು.