ತುಮಕೂರಿನಲ್ಲಿ 139ಕ್ಕೆ ಏರಿಕೆಯಾದ ಸೋಂಕಿತರ ಸಂಖ್ಯೆ: ಹೆಚ್ಚುತ್ತಲೇ ಇದೆ ಆತಂಕ
ತುಮಕೂರು: ಕಲ್ಪತರು ನಾಡು ತುಮಕೂರು ಜಿಲ್ಲೆಯಲ್ಲಿ 26 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿದ್ದು, ಸೋಂಕಿತರ ಸಂಖ್ಯೆ 139ಕ್ಕೆ ಏರಿಕೆ ಆದಂತಾಗಿದೆ. ತುಮಕೂರು ಜಿಲ್ಲಾ ಕೋವಿಡ್-19 ಆಸ್ಪತ್ರೆಯಲ್ಲಿ 83 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, ಕುಣಿಗಲ್ ತಾಲೂಕಿನ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. ತುಮಕೂರು ಜಿಲ್ಲಾ ಆಸ್ಪತ್ರೆಯಲ್ಲಿ 10 ಮಂದಿ ಸೋಂಕಿತರು ಸಂಪೂರ್ಣ ಗುಣಮುಖರಾಗಿದ್ದು, ಜಿಲ್ಲಾದ್ಯಂತ ಗುಣಮುಖರಾದವರ ಸಂಖ್ಯೆ 49ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಇದುವರೆಗೂ 18,461 ಮಂದಿಯ ಗಂಟಲು ದ್ರವ ಪರೀಕ್ಷೆ ನಡೆಸಲಾಗಿದ್ದು, ಅದರಲ್ಲಿ 15,606 ಜನರ ವರದಿ ನೆಗೆಟಿವ್ ಬಂದಿದೆ.