ದ್ವಿತೀಯ ಪಿಯುಸಿ : ಕಲ್ಪತರುನಾಡಿನಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿವರು - ದ್ವಿತೀಯ ಪಿಯುಸಿ
ತುಮಕೂರು : ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದೆ. ಜಿಲ್ಲೆಯ ಮೂವರು ವಿದ್ಯಾರ್ಥಿಗಳು ಅತಿ ಹೆಚ್ಚು ಅಂಕಗಳನ್ನ ಗಳಿಸುವ ಮೂಲಕ ಗಮನ ಸೆಳೆದಿದ್ದಾರೆ. ಕುಣಿಗಲ್ ತಾಲೂಕಿನ ಜ್ಞಾನಭಾರತಿ ಕಾಲೇಜಿನ ವಿಜ್ಞಾನ ವಿಭಾಗದಲ್ಲಿ ಆಲ್ಬಸ್ ಬಾನು ಎಂಬ ವಿದ್ಯಾರ್ಥಿನಿ 594 ಅಂಕ ಗಳಿಸಿದ್ದಾರೆ. ನಗರದ ವಿದ್ಯಾನಿಧಿ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಅತಿ ಹೆಚ್ಚು ಅಂಕ ಗಳಿಸುವ ಮೂಲಕ ಸಂಸ್ಥೆಗೆ ಹೆಮ್ಮೆ ತಂದಿದ್ದಾರೆ. ಅದರಲ್ಲಿ ವಾಣಿಜ್ಯ ವಿಭಾಗದಲ್ಲಿ ಜೆ.ತರುಣ್ ಎಂಬ ವಿದ್ಯಾರ್ಥಿ 594 ಅಂಕ ಗಳಿಸಿದ್ದಾರೆ. ರಾಜ್ಯದಲ್ಲಿಯೇ 4ನೇ ಸ್ಥಾನ ಗಳಿಸಿರುವ ತರುಣ್ ಜಿಲ್ಲೆಯಲ್ಲಿ ಪ್ರಥಮ ಸ್ಥಾನ ತಮ್ಮದಾಗಿಸಿಕೊಂಡಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಎ.ದೀಪ್ತಿ ಎಂಬ ವಿದ್ಯಾರ್ಥಿನಿ 593 ಅಂಕ ಗಳಿಸಿದ್ದಾರೆ. ರಾಜ್ಯದಲ್ಲಿಯೇ 4ನೇ ಸ್ಥಾನವನ್ನು ತಮ್ಮದಾಗಿಸಿಕೊಂಡಿರುವ ದೀಪ್ತಿ ಜಿಲ್ಲೆಯಲ್ಲಿ 2ನೇ ಸ್ಥಾನ ಪಡೆದುಕೊಂಡಿದ್ದಾರೆ. ಅತಿ ಹೆಚ್ಚು ಅಂಕಗಳಿಸಿರುವ ಇಬ್ಬರು ವಿದ್ಯಾರ್ಥಿಗಳು ಈಟಿವಿ ಭಾರತ ಜೊತೆ ತಮ್ಮ ಅನುಭವ ಹಂಚಿಕೊಂಡಿದ್ದಾರೆ.