ಪುಲ್ವಾಮ ದಾಳಿಗೆ ಎರಡು ವರ್ಷ: ಬಿಜೆಪಿ ರಾಜ್ಯಾಧ್ಯಕ್ಷರಿಂದ ಹುತಾತ್ಮ ಸ್ಮಾರಕದಲ್ಲಿ ನಮನ - manglore news
ಮಂಗಳೂರು: ಪುಲ್ವಾಮ ದಾಳಿ ನಡೆದು ಎರಡು ವರ್ಷ ಸಂದ ಹಿನ್ನೆಲೆಯಲ್ಲಿ ಬಿಜೆಪಿ ದ.ಕ. ಜಿಲ್ಲಾಡಳಿತದ ವತಿಯಿಂದ ನಗರದ ಕದ್ರಿಯಲ್ಲಿರುವ ಸರ್ಕ್ಯೂಟ್ ಹೌಸ್ ಬಳಿಯ ಹುತಾತ್ಮರ ಸ್ಮಾರಕದಲ್ಲಿ ದಾಳಿಯಲ್ಲಿ ಪ್ರಾಣತೆತ್ತ ಯೋಧರಿಗೆ ನಮನ ಸಲ್ಲಿಸಲಾಯಿತು. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಶಾಸಕ ವೇದವ್ಯಾಸ ಕಾಮತ್, ಬಲಿದಾನಗೈದ ಯೋಧರಿಗೆ ಪುಷ್ಪನಮನ ಸಲ್ಲಿಸಿದರು. ನಂತರ ಒಂದು ನಿಮಿಷದ ಮೌನ ಪ್ರಾರ್ಥನೆ ಸಲ್ಲಿಸಲಾಯಿತು. ಈ ಸಂದರ್ಭ ಮಂಗಳೂರು ಮೇಯರ್ ದಿವಾಕರ ಪಾಂಡೇಶ್ವರ, ಮುಡಾ ಅಧ್ಯಕ್ಷ ರವಿಶಂಕರ್ ಮಿಜಾರ್, ಮನಪಾ ಸದಸ್ಯರಾದ ಕದ್ರಿ ಮನೋಹರ ಶೆಟ್ಟಿ, ಪೂರ್ಣಿಮಾ ಭಟ್ ಮತ್ತಿತರರು ಉಪಸ್ಥಿತರಿದ್ದರು.