ಗ್ರಾಮೀಣ ಭಾಗಕ್ಕೆ ಉಚಿತ ಬಸ್ ವ್ಯವಸ್ಥೆ ಕಲ್ಪಿಸಿದ ಉಡುಪಿ ಶಾಸಕ - ಉಡುಪಿ ಗ್ರಾಮೀಣ ಭಾಗಕ್ಕೆ ಉಚಿತ ಬಸ್ ವ್ಯವಸ್ಥೆ
ಉಡುಪಿ: ಕೊರೊನಾ ಹಾವಳಿ ಹಿನ್ನೆಲೆ ಉಡುಪಿ ಜಿಲ್ಲೆಯಲ್ಲಿ ಸಂಚಾರ ವ್ಯವಸ್ಥೆ ಸಂಪೂರ್ಣ ಬಂದ್ ಆಗಿತ್ತು. ಇದರಿಂದ ಗ್ರಾಮೀಣ ಭಾಗದ ಜನರು ಬಸ್ ಇಲ್ಲದೇ ಪರದಾಡುತ್ತಿದ್ದರು. ಇದನ್ನು ಮನಗಂಡ ಉಡುಪಿ ಶಾಸಕ ರಘುಪತಿ ಭಟ್ ವಿವಿಧ ಸಂಘ ಸಂಸ್ಥೆಗಳೊಂದಿಗೆ ಸೇರಿಕೊಂಡು ಉಚಿತ ಬಸ್ ಸಂಚಾರ ಸೇವೆಗೆ ಚಾಲನೆ ನೀಡಿದ್ದಾರೆ.