ನಾನು ಎಂಟು ಬಾರಿ ಶಾಸಕನಾಗಿದ್ದೇನೆ: ಸಚಿವ ಸ್ಥಾನದ ಬಗ್ಗೆ ಉಮೇಶ್ ಕತ್ತಿ ಹೇಳೋದು ಹೀಗೆ - ಹಿರಿಯ ಶಾಸಕ ಉಮೇಶ್ ಕತ್ತಿ
ಬೆಂಗಳೂರು: ನಾನು ಎಂಟು ಬಾರಿ ಶಾಸಕನಾಗಿ ಆಯ್ಕೆಯಾದವನು. ಸಚಿವನನ್ನಾಗಿ ಮಾಡಿದರೆ ಕೆಲಸ ಮಾಡುತ್ತೇನೆ. ಇಲ್ಲವಾದರೆ ಶಾಸಕನಾಗಿ ನನ್ನ ಕರ್ತವ್ಯ ಮುಂದುವರೆಸುತ್ತೇನೆ ಎಂದು ಹಿರಿಯ ಶಾಸಕ ಉಮೇಶ್ ಕತ್ತಿ ಹೇಳಿದ್ದಾರೆ. ವಿಧಾನಸೌಧದಲ್ಲಿ ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ನನ್ನನ್ನು ಮಂತ್ರಿ ಮಾಡಿ ಎಂದು ಕೇಳಿಲ್ಲ. ಆದರೆ, ನನಗೆ ಸಚಿವ ಸ್ಥಾನ ಕೊಡುವುದಾಗಿ ಭರವಸೆ ನೀಡಿದ್ದಾರೆ ಎಂದರು.