ಸ್ವಗೃಹದಲ್ಲಿ ಯೋಗಾಸನ ಮಾಡಿದ ಕೇಂದ್ರ ಸಚಿವ ಸುರೇಶ್ ಅಂಗಡಿ - ಕೇಂದ್ರ ಸಚಿವ ಸುರೇಶ ಅಂಗಡಿ
ಕೇಂದ್ರ ಸಚಿವ ಸುರೇಶ ಅಂಗಡಿ ಅವರು ಬೆಳಗಾವಿಯ ತಮ್ಮ ಮನೆಯಲ್ಲಿ ಯೋಗ ದಿನಾಚರಿಸಿದರು. ವಿಶ್ವೇಶ್ವರಯ್ಯ ನಗರದ ಸಂಪಿಗೆ ರಸ್ತೆಯಲ್ಲಿರುವ ನಿವಾಸದಲ್ಲಿ ಅವರು ವಿವಿಧ ರೀತಿಯ ಯೋಗಾಸನದ ಭಂಗಿಗಳನ್ನು ಮಾಡಿದರು. ವಿಶ್ವಕ್ಕೆ ಭಾರತ ನೀಡಿದ ಮಹತ್ವದ ಕೊಡುಗೆಗಳಲ್ಲಿ ಯೋಗವೂ ಒಂದು. ಹೀಗಾಗಿ ಜೂ.21ರಂದು ವಿಶ್ವದಾದ್ಯಂತ ಯೋಗ ದಿನವನ್ನು ಆಚರಿಸಲಾಗುತ್ತಿದೆ. ಪ್ರತಿಯೊಬ್ಬರೂ ದೈಹಿಕ ಹಾಗೂ ಮಾನಸಿಕವಾಗಿ ಸದೃಢವಾಗಲು ಯೋಗಾಭ್ಯಾಸ ಮಾಡಬೇಕು ಎಂದು ಸಚಿವರು ಮನವಿ ಮಾಡಿದ್ದಾರೆ.