ಹೊಸಪೇಟೆ : ಕನ್ನಡ ವಿವಿ ಉಳಿವಿಗಾಗಿ ವಿಶಿಷ್ಟ ರೀತಿ ಪ್ರತಿಭಟನೆ.. - ತಹಶೀಲ್ದಾರ್ ಕಚೇರಿ ಮುಂಭಾಗ ಪ್ರತಿಭಟನೆ
ಕನ್ನಡ ವಿಶ್ವವಿದ್ಯಾಲಯ ಉಳಿವಿಗಾಗಿ ಕೂಡಲೇ 100 ಕೋಟಿ ರೂ. ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ನಾನಾ ಸಂಘಟನೆಗಳ ನೇತೃತ್ವದಲ್ಲಿ ವಿಶಿಷ್ಟ ರೀತಿಯಲ್ಲಿ ನಗರದ ತಹಶೀಲ್ದಾರ್ ಕಚೇರಿ ಮುಂಭಾಗ ಪ್ರತಿಭಟಿಸಲಾಯಿತು. ಭಾಷಣ, ಸಂಗೀತ, ಕವಿಗೋಷ್ಠಿ ಮೂಲಕ ಸರ್ಕಾರಕ್ಕೆ ವಿಶಿಷ್ಟ ರೀತಿಯಲ್ಲಿ ಆಗ್ರಹಿಸಲಾಯಿತು. ಕೊರೊನಾ ನೆಪವೊಡ್ಡಿ ವಿಶ್ವವಿದ್ಯಾಲಯಕ್ಕೆ ಅನುದಾನ ಬಿಡುಗಡೆ ಮಾಡುತ್ತಿಲ್ಲ. ಇದರಿಂದ ವಿಶ್ವವಿದ್ಯಾಲಯ ನಡೆಸುವುದು ಕಷ್ಟಕರವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.