ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ: ಕೊಲೆ ಶಂಕೆ - ಅಪರಿಚಿತ ವ್ಯಕ್ತಿಯ ಮೃತದೇಹ
ಹಾಸನ: ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿರುವ ಘಟನೆ, ಅರಸೀಕೆರೆ ತಾಲೂಕಿನ ಜೆಸಿ ಪುರ ಮತ್ತು ಬಿಳಿಕಲ್ ಗೇಟ್ ಸಮೀಪದ ಜಮೀನೊಂದರಲ್ಲಿ ನಡೆದಿದೆ. ಮೃತ ವ್ಯಕ್ತಿ ಮೂರ್ನಾಲ್ಕು ದಿನದ ಹಿಂದೆ ಸಾವನಪ್ಪಿದ್ದಾನೆ ಎನ್ನಲಾಗಿದ್ದು, ಬಟ್ಟೆಯ ಮೇಲೆ ರಕ್ತದ ಕಲೆಗಳು ಇವೆ. ಬಹುತೇಕ ಇದೊಂದು ಕೊಲೆ ಎಂದು ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದಾರೆ. ಮರಣೋತ್ತರ ಪರೀಕ್ಷೆಗೆ ಅರಸೀಕೆರೆ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದು, ಗ್ರಾಮಾಂತರ ಪೊಲೀಸರು ಪ್ರಕರಣವನ್ನು ದಾಖಸಿಕೊಂಡಿದ್ದಾರೆ.