ಬಜೆಟ್ನಲ್ಲಿ ಉತ್ತರ ಕನ್ನಡ ಜಿಲ್ಲೆಯ ಜನರ ನಿರೀಕ್ಷೆಗಳು ಹೀಗಿವೆ - ಬಜೆಟ್ 2020
ಮಲೆನಾಡು, ಅರೆಮಲೆನಾಡು ಹಾಗೂ ಕರಾವಳಿ ಪ್ರದೇಶಗಳನ್ನೊಳಗೊಂಡಿರುವ ಉತ್ತರ ಕನ್ನಡ ಜಿಲ್ಲೆಯ ನಿರುದ್ಯೋಗ, ಮತ್ಸ್ಯಕ್ಷಾಮ, ಬೆಳೆಹಾನಿ, ರೈತರು ಬೆಳೆದ ಬೆಳೆಗಳಿಗೆ ಸೂಕ್ತ ಬೆಲೆ ಸಿಗದಿರುವುದು ಈ ಭಾಗದ ಜನರನ್ನು ಸಂಕಷ್ಟಕ್ಕೆ ಸಿಲುಕುವಂತೆ ಮಾಡಿದೆ. ಈ ಹಿನ್ನೆಲೆ ಮಾರ್ಚ್ 5ರಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬಜೆಟ್ ಮಂಡಿಸಲಿದ್ದು, ಜಿಲ್ಲೆಯ ಜನರಿಗೆ ಬೆಟ್ಟದಷ್ಟು ನಿರೀಕ್ಷೆಗಳು ಮೂಡಿವೆ.