ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಸಿ ಪ್ರತಿಭಟನೆ ನಡೆಸಿದ ಉತ್ತರ ಕರ್ನಾಟಕ ರೈತ ಸಂಘ - ಉತ್ತರ ಕರ್ನಾಟಕ ರೈತ ಸಂಘ
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಗರದಲ್ಲಿ ಉತ್ತರಕರ್ನಾಟಕ ರೈತ ಸಂಘ ಪ್ರತಿಭಟನೆ ನಡೆಸಿತು. ನಗರದ ಹೊಸಮನಿ ಸಿದ್ದಪ್ಪ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ನಡೆಸಿದ ರೈತರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಮಹಾತ್ಮಾಗಾಂಧೀಜಿ ವೃತ್ತದಲ್ಲಿ ಸೇರಿದ ರೈತರು ರಾಜ್ಯದ ನೆರೆಯಲ್ಲಿ ಸಾವನ್ನಪ್ಪಿದವರಿಗೆ ಮೌನಾಚರಣೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ರೈತ ಮುಖಂಡರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಉತ್ತರಕರ್ನಾಟಕ ನೆರೆ ಹಾವಳಿಯಿಂದ ತತ್ತರಿಸಿದೆ. ಇದರಲ್ಲಿ ಸಹ ಜನಪ್ರತಿನಿಧಿಗಳು ಮಲತಾಯಿದೋರಣೆ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿದರು. ನೆರೆ ಸಂತ್ರಸ್ತರಿಗೆ ಈ ಕೂಡಲೇ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.