ಕಾರವಾರ: ಪ್ರವಾಹ ಪರಿಸ್ಥಿತಿ ಮರುಕಳಿಸದಂತೆ ಜಿಲ್ಲಾಡಳಿತದಿಂದ ಮುನ್ನೆಚ್ಚರಿಕೆ - uttarakannada news
ಕಾರವಾರ (ಉತ್ತರ ಕನ್ನಡ): ಜಿಲ್ಲೆಯಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಕಳೆದ ಬಾರಿಯ ಭೀಕರ ನೆರೆ ಪರಿಸ್ಥಿತಿಯನ್ನು ಅನುಭವಿಸಿದ್ದ ಜನರು, ಇದೀಗ ಮತ್ತೆ ವರುಣನ ಆರ್ಭಟಕ್ಕೆ ಕಂಗಾಲಾಗಿದ್ದಾರೆ. ಈ ನಡುವೆ ಕಳೆದ ವರ್ಷದ ಪ್ರವಾಹ ಪರಿಸ್ಥಿತಿ ಮತ್ತೆ ಮರುಕಳಿಸದಂತೆ ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಡಳಿತ ಸಹ ಸನ್ನದ್ಧವಾಗಿದ್ದು, ನೆರೆಗೊಳಗಾಗುವ ಪ್ರದೇಶಗಳ ಜನರನ್ನು ಸುರಕ್ಷಿತವಾಗಿಡಲು ಯೋಜನೆ ರೂಪಿಸಿದೆ.