ಮಂಡ್ಯ: ಕೋವಿಡ್ ನಿಯಮಾನುಸಾರ ದೇವಾಲಯಗಳಲ್ಲಿ ವೈಕುಂಠ ಏಕಾದಶಿ ಆಚರಣೆ
ವೈಕುಂಠ ಏಕಾದಶಿ ಹಿನ್ನೆಲೆ ಮಂಡ್ಯ ನಗರದ ಹೊಸಹಳ್ಳಿಯಲ್ಲಿರುವ ಶ್ರೀ ಲಕ್ಷ್ಮಿ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜಾ ಕೈಂಕರ್ಯ ನಡೆಯುತ್ತಿದೆ. ಜಿಲ್ಲೆಯಲ್ಲಿರುವ ಶ್ರೀ ಲಕ್ಷ್ಮಿ ವೆಂಕಟೇಶ್ವರ ಸ್ವಾಮಿ ದೇವರಿಗೆ ವಿಶೇಷ ಪೂಜೆ ಮಾಡಲಾಗ್ತಿದೆ. ಬೆಳಗ್ಗೆ 5 ಗಂಟೆಗೆ ವೈಕುಂಠ ದ್ವಾರ ತೆರೆದು ಪೂಜೆ ಮಾಡಿ ಬಳಿಕ ಭಕ್ತಾದಿಗಳಿಗೆ ವಿಶೇಷವಾಗಿ ದೇವರ ದರ್ಶನಕ್ಕೆ ಅನುವು ಮಾಡಿ ಕೊಡಲಾಗಿದೆ. ದೇವಸ್ಥಾನದ ಬಳಿ ಸರದಿಯಲ್ಲಿ ನಿಂತು ಭಕ್ತರು ದೇವರ ದರ್ಶನ ಪಡೆಯುತ್ತಿದ್ದಾರೆ. ದೇವಸ್ಥಾನದ ಆಡಳಿತ ಮಂಡಳಿ ಸರ್ಕಾರದ ಕೊರೊನಾ ನಿಯಮಾನುಸಾರವಾಗಿ ಮುಂಜಾಗ್ರತಾ ಕ್ರಮ ಕೈಗೊಂಡು ಮಾಸ್ಕ್, ಸ್ಯಾನಿಟೈಜರ್, ಸಾಮಾಜಿಕ ಅಂತರ ಕಡ್ಡಾಯಗೊಳಿಸಿದೆ.