ಮಂತ್ರಾಲಯದಲ್ಲಿ ವೈಕುಂಠ ಏಕಾದಶಿ ಸಂಭ್ರಮ - vaikunta ekadashi in mantralaya
ಮಂತ್ರಾಲಯದ ಶ್ರೀರಾಘವೇಂದ್ರ ಮಠದ ಪೀಠಾಧಿಪತಿ ಶ್ರೀಸುಬುಧೇಂದ್ರ ತೀರ್ಥರು ವೈಕುಂಠ ಏಕಾದಶಿ ನಿಮಿತ್ತ ವಿಶೇಷ ಪೂಜೆ ಸಲ್ಲಿಸಿದ್ರು. ಬಳಿಕ ಶ್ರೀವೆಂಕಟೇಶ್ವರ ದೇವಾಲಯದ ಮುಖ್ಯದ್ವಾರ ಉದ್ಘಾಟಿಸಿದರು. ಶ್ರೀ ವೆಂಕಟೇಶ್ವರ ಸ್ವಾಮಿಗೆ ವಿಶೇಷ ಪೂಜೆ ಕೈಂಕರ್ಯ ನೆರವೇರಿಸಿದ್ರು. ಏಕಾದಶಿ ಪ್ರಯುಕ್ತ ದೇವಾಲಯಕ್ಕೆ ಹಾಗೂ ದೇವರ ಮೂರ್ತಿಗೆ ವಿವಿಧ ಬಗೆಯ ಪುಷ್ಪಾಂಲಕಾರ ಮಾಡಲಾಯಿತು. ಈ ವೇಳೆ ಶ್ರೀಮಠದ ಅಧಿಕಾರಿಗಳು, ಸಿಬ್ಬಂದಿ, ಭಕ್ತರು ಭಾಗವಹಿಸಿದ್ದರು.