ದೇವನಹಳ್ಳಿಯ ವೇಣುಗೋಪಾಲಸ್ವಾಮಿ ದರ್ಶನಕ್ಕೆ ಹರಿದು ಬಂದ ಭಕ್ತಸಾಗರ - ದೇವನಹಳ್ಳಿಯ ಇತಿಹಾಸ ಪ್ರಸಿದ್ದ ವೇಣುಗೋಪಾಲಸ್ವಾಮಿ ದೇವಾಲಯ
ದೇವನಹಳ್ಳಿ: ರಾಜ್ಯದೆಲ್ಲೆಡೆ ಇಂದು ವೈಕುಂಠ ಏಕಾದಶಿ ಸಂಭ್ರಮ ಮನೆ ಮಾಡಿದ್ದು, ವೆಂಕಟೇಶ್ವರನ ದರ್ಶನ ಪಡೆಯಲು ಭಕ್ತಾಧಿಗಳ ದಂಡೇ ಹರಿದು ಬರುತ್ತಿದೆ. ಅದರಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಇತಿಹಾಸ ಪ್ರಸಿದ್ಧ ವೇಣುಗೋಪಾಲಸ್ವಾಮಿ ದೇವಾಲಯಕ್ಕೆ ಬೆಳಗ್ಗೆಯಿಂದಲೂ ಭಕ್ತಾಧಿಗಳು ಸಾಗರೋಪಾದಿಯಲ್ಲಿ ಬರುತ್ತಿದ್ದಾರೆ. ಇಲ್ಲಿ ವೇಣುಗೋಪಾಲಸ್ವಾಮಿಗೆ ವಿಶೇಷ ಅಲಂಕಾರ ಮಾಡಲಾಗಿದೆ. ದೇವಾಲಯದ ಹೊರಗೆ ವೈಕುಂಠದ್ವಾರ ನಿರ್ಮಿಸಲಾಗಿದೆ. ಭಕ್ತರಿಗೆ ಪ್ರಸಾದ ವಿತರಿಸಲಾಯಿತು. ದೇವಾಲಯ ಹೂಗಳಿಂದ ಕಂಗೊಳಿಸುತ್ತಿದೆ.