ಕೊರೊನಾ ಭೀತಿ ನಡುವೆ ಗೊರವನಹಳ್ಳಿ ಮಹಾಲಕ್ಷ್ಮಿ ದರ್ಶನ ಪಡೆದ ಭಕ್ತರು - ಕೊರೊನಾ ಮುಂಜಾಗ್ರತಾ ಕ್ರಮ
ತುಮಕೂರು: ಕೊರೊನಾ ಭೀತಿ ಹಿನ್ನೆಲೆಯಲ್ಲಿ ವರಮಹಾಲಕ್ಷ್ಮಿ ಹಬ್ಬವಾದ ಇಂದು ತುಮಕೂರು ಜಿಲ್ಲೆ ಗೊರವನಹಳ್ಳಿ ಮಹಾಲಕ್ಷ್ಮಿ ದೇಗುಲಕ್ಕೆ ಅತಿ ಕಡಿಮೆ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ದೇವಿಯ ದರ್ಶನ ಪಡೆದರು. ಈ ಬಾರಿ ದೇವಸ್ಥಾನದಲ್ಲಿ ಮುಂಜಾಗ್ರತಾ ಕ್ರಮವಾಗಿ ಪ್ರತಿಯೊಬ್ಬರೂ ಮಾಸ್ಕ್ಗಳನ್ನು ಧರಿಸಬೇಕು, ಸ್ಯಾನಿಟೈಸರ್ ಬಳಸಬೇಕು ಮತ್ತು ಸಾಮಾಜಿಕ ಅಂತರವನ್ನು ಪಾಲನೆ ಮಾಡಬೇಕು ಎಂಬ ನಿಯಮವನ್ನು ಜಾರಿಗೆ ತರಲಾಗಿತ್ತು. ಅಲ್ಲದೇ ಈ ಬಾರಿ ಯಾವುದೇ ರೀತಿಯ ಪ್ರಸಾದ ಮತ್ತು ತೀರ್ಥದ ವ್ಯವಸ್ಥೆಯನ್ನು ಮಾಡಿರಲಿಲ್ಲ.