ಸುದ್ದಿಗೋಷ್ಠಿಯಲ್ಲಿ ಹಾಡು ಹಾಡಿದ ವಿಜಯ್ ಪ್ರಕಾಶ್, ರಾಜೇಶ್ ಕೃಷ್ಣನ್ : ವಿಡಿಯೋ - ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ
ಶಿವಮೊಗ್ಗ ನಗರದ ಖಾಸಗಿ ಹೋಟೆಲ್‌ನಲ್ಲಿ ನಾಳೆ ನಡೆಯಲಿರುವ ಮುಖ್ಯಮಂತ್ರಿಗಳಿಗೆ ನಾಗರಿಕ ಸನ್ಮಾನ ಕಾರ್ಯಕ್ರಮದಲ್ಲಿ ಸಂಗೀತ ಸಂಜೆ ಕಾರ್ಯಕ್ರಮದ ಕುರಿತು ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಗಾಯಕರಾದ ವಿಜಯ್ ಪ್ರಕಾಶ್ ಹಾಗೂ ರಾಜೇಶ್ ಕೃಷ್ಣನ್ ಹಾಡು ಹಾಡಿ ರಂಜಿಸಿದರು. ನಾಳೆ ನಗರದ ಪ್ರೀಡಂ ಪಾರ್ಕ್‌ನಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರಿಗೆ ಶಿವಮೊಗ್ಗ ಜಿಲ್ಲೆಯ ನಾಗರಿಕರಿಂದ ನಾಗರಿಕ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿದೆ. ಕಾರ್ಯಕ್ರಮದ ನಂತರ ಸಂಗೀತ ಸಂಜೆ ಕಾರ್ಯಕ್ರಮವೂ ನಡೆಯಲಿದೆ.