ವಿಜಯಪುರದ ನಿರಾಶ್ರಿತರ ಪರಿಹಾರ ಕೇಂದ್ರಕ್ಕೆ ಜಿಲ್ಲಾಧಿಕಾರಿಗಳ ದಿಢೀರ್ ಭೇಟಿ - ವಿಜಯಪುರದ ನಿರಾಶ್ರಿತರ ಪರಿಹಾರ ಕೇಂದ್ರಕ್ಕೆ ಜಿಲ್ಲಾಧಿಕಾರಿಗಳ ದಿಢೀರ್ ಭೇಟಿ
ವಿಜಯಪುರ: ನಗರದ ಟಕ್ಕೆಯಲ್ಲಿರುವ ನಿರಾಶ್ರಿತರ ಪರಿಹಾರ ಕೇಂದ್ರಕ್ಕೆ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ್ ಭೇಟಿ ನೀಡಿದರು. ಈ ವೇಳೆ ಊಟ-ವಸತಿ ಹಾಗೂ ಆರೈಕೆ ಕ್ರಮಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು. ನಿರಾಶ್ರಿತರ ಪರಿಹಾರ ಕೇಂದ್ರದಲ್ಲಿ ವೃದ್ಧರು, ಬುದ್ಧಿಮಾಂದ್ಯರು ಸೇರಿದಂತೆ 130ಕ್ಕೂ ಅಧಿಕ ಜನ ನಿರಾಶ್ರಿತರು ಆಶ್ರಯ ಪಡೆಯುತ್ತಿದ್ದು, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಮಹೇಶ ಪೋತದಾರ ಜಿಲ್ಲಾಧಿಕಾರಿಗೆ ಸಾಥ್ ನೀಡಿದರು. ನಿರಾಶ್ರಿತರ ಕೇಂದ್ರದ ಅಧೀಕ್ಷಕಿ ಪದ್ಮಜಾ ಪಾಟೀಲ, ನಿರಾಶ್ರಿತರ ಪರಿಹಾರ ಕಾರ್ಯ ಚಟುವಟಿಕೆಗಳ ಕುರಿತು ಜಿಲ್ಲಾಧಿಕಾರಿಗೆ ಮಾಹಿತಿ ನೀಡಿದರು. ಸ್ವಚ್ಛತೆ ಹಾಗೂ ಗುಣಮಟ್ಟದ ಆಹಾರಕ್ಕೆ ಹೆಚ್ಚಿನ ಆದ್ಯತೆ ನೀಡುವಂತೆ ನಿರಾಶ್ರಿತರ ಕೇಂದ್ರ ಸಿಬ್ಬಂದಿಗೆ ಜಿಲ್ಲಾಧಿಕಾರಿ ವೈ ಎಸ್ ಪಾಟೀಲ ಸೂಚಿಸಿದರು.