ಕಣ್ಮನ ಸೆಳೆದ 'ಮಕ್ಕಳ ಹಬ್ಬ' ಸಾಂಸ್ಕೃತಿಕ ಕಾರ್ಯಕ್ರಮ - ವಿಜಯಪುರ ಮಕ್ಕಳ ಹಬ್ಬ ಸಾಂಸ್ಕೃತಿಕ ಕಾರ್ಯಕ್ರಮ
ವಿಜಯಪುರ: ಜಿಲ್ಲಾಡಳಿತ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಶಾಲಾ ಮಕ್ಕಳಿಗಾಗಿ 'ಮಕ್ಕಳ ಹಬ್ಬ' ಶೀರ್ಷಿಕೆಯಲ್ಲಿ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ಆನಂದ ಮಹಲ್‌ನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಿತ್ತು. ಕಾರ್ಯಕ್ರಮದಲ್ಲಿ ಮಕ್ಕಳ ನೃತ್ಯ ನೋಡಿದ ಜನರು ಸಿಳ್ಳೆ ಚಪ್ಪಾಳೆ ಮೂಲಕ ಪ್ರೋತ್ಸಾಹಿಸಿದರು. ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗಿಯಾದ ಮಕ್ಕಳಿಗೆ ಪ್ರಶಸ್ತಿ ಪತ್ರಗಳನ್ನು ನೀಡುವುದರ ಮೂಲಕ ಜಿಲ್ಲಾಧಿಕಾರಿ ವೈ ಎಸ್ ಪಾಟೀಲ ಮಕ್ಕಳ ಕಲೆಯನ್ನು ಪ್ರೋತ್ಸಾಹಿಸಿದರು. ಕಾರ್ಯಕ್ರಮಕ್ಕೆ ವಿದೇಶಿ ಪ್ರವಾಸಿಗರು ಆಗಮಿಸಿ ನೆರೆದಿದ್ದವರ ಗಮನ ಸೇಳೆದರು. ಜಿಲ್ಲಾಧಿಕಾರಿ, ವಿದೇಶಿ ಪ್ರವಾಸಿಗರಿಂದ ಮಕ್ಕಳಿಗೆ ಪ್ರಶಸ್ತಿ ಪತ್ರಗಳನ್ನು ವಿತರಿಸುವುದರ ಮೂಲಕ ಜನ ಮೆಚ್ಚುಗೆ ಪಡೆದರು.