ಕರ್ನಾಟಕ

karnataka

ETV Bharat / videos

ಲ್ಯಾಪ್‌ಟಾಪ್ ವಿವಾದ: ರಸ್ತೆಗಿಳಿದು ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು - Vijayapura student protest for laptop,

By

Published : Jan 18, 2020, 9:36 PM IST

ವಿಜಯಪುರ: ಪದವಿ ಓದುವ ಎಲ್ಲ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ನೀಡುವಂತೆ ಒತ್ತಾಯಿಸಿ ಎಐಡಿಎಸ್‌ಓ ಸಂಘಟನೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು‌‌. ವಿಜಯಪುರ ನಗರದ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು, ಸಮಿಶ್ರ ಸರ್ಕಾರದ ಅವಧಿಯಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ನೀಡಬೇಕು ಎಂದು ‌ಯೋಜನೆ ಜಾರಿ ಮಾಡಲಾಗಿತ್ತು. ಆದ್ರೆ ಇಂದಿನ ಬಿಜೆಪಿ‌ ಸರ್ಕಾರ ಕಳೆದ ವರ್ಷದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಣೆ ಮಾಡದೇ, ಈ ವರ್ಷದ ವಿದ್ಯಾರ್ಥಿಗಳಿಗೆ ನೀಡುತ್ತಿದೆ ಎಂದು ಪ್ರತಿಭಟನಾನಿರತ ವಿದ್ಯಾರ್ಥಿಗಳು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯದ ಪ್ರತಿ ಜಿಲ್ಲೆಯಲ್ಲಿ ವಿದ್ಯಾರ್ಥಿಗಳು ಲ್ಯಾಪ್​ಟಾಪ್ ವಿತರಣೆ ಬಗ್ಗೆ ಪ್ರತಿಭಟನೆ ನಡೆಸುತ್ತಿದ್ದಾರೆ. ಶೀಘ್ರವಾಗಿ ಪದವಿ ಓದುವ ಎಲ್ಲ ವಿದ್ಯಾರ್ಥಿಗಳಿಗೆ ಸರ್ಕಾರ ಉಚಿತ ಲ್ಯಾಪ್‌ಟಾಪ್ ನೀಡುಬೇಕು‌ ಎಂದು ಪ್ರತಿಭಟನೆ ನಡೆಸಿದರು.

ABOUT THE AUTHOR

...view details