ನೆರೆ ಸಂತ್ರಸ್ತರಿಗೆ ಪರಿಹಾರದ ಕಿಟ್ ವಿತರಿಸಿದ ವಿನಯ್ ಗುರೂಜಿ
ಶಿವಮೊಗ್ಗ: ಕೊಪ್ಪದ ಗೌರಿಗದ್ದೆಯ ವಿನಯ್ ಗುರೂಜಿಯವರು ಪ್ರವಾಹ ಸಂತ್ರಸ್ತರಿಗೆ ಪರಿಹಾರದ ಕಿಟ್ ವಿತರಿಸಿದರು. ಮಹಾತ್ಮ ಗಾಂಧಿ ಸೇವಾ ಟ್ರಸ್ಟ್ ಹಾಗೂ ಸರ್ಜಿ ಆಸ್ಪತ್ರೆ ಸಹಯೋಗದೊಂದಿಗೆ ನೆರೆ ಹಾವಳಿಗೆ ತುತ್ತಾದ ರಾಜೀವ್ ಗಾಂಧಿ ಬಡಾವಣೆ ಹಾಗೂ ಕುಂಬಾರಗುಂಡಿಯ ಜನರಿಗೆ ದಿನ ನಿತ್ಯ ಬಳಕೆಯ ಸಾಮಾಗ್ರಿಗಳನ್ನು ನೀಡಿದರು. ನಂತರ ಕನ್ನಿಕಾ ಪರಮೇಶ್ವರಿ ದೇವಾಲಯದಲ್ಲಿ ಆಯೋಜಿಸಿದ್ದ ನೆರೆ ಸಂತ್ರಸ್ತರ ಮಕ್ಕಳಿಗೆ ಲಸಿಕೆ ಹಾಕುವ ಶಿಬಿರಕ್ಕೂ ಗುರೂಜಿ ಚಾಲನೆ ನೀಡಿದರು.