ಭೀಮಾನದಿ ಪ್ರವಾಹಕ್ಕೆ ವೀರಾಂಜನೇಯ, ಕಂಗಳೇಶ್ವರ ದೇವಸ್ಥಾನ ಜಲಾವೃತ - temple drown in yadagiri news
ಸನ್ನತಿ ಬ್ರಿಡ್ಜ್ ಕಮ್ ಬ್ಯಾರೇಜ್ನಿಂದ 30 ಸಾವಿರ ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಿರುವ ಹಿನ್ನೆಲೆ ಭೀಮಾ ನದಿ ಉಕ್ಕಿ ಹರಿಯುತ್ತಿದೆ. ಹೀಗಾಗಿ ಯಾದಗಿರಿ ನಗರದ ಸಮೀಪದ ನದಿ ದಂಡೆಯಲ್ಲಿರುವ ವೀರಾಂಜನೇಯ ಸ್ವಾಮಿ ಮತ್ತು ಕಂಗಳೇಶ್ವರ ದೇವಸ್ಥಾನ ಜಲಾವೃತಗೊಂಡಿವೆ. ಭೀಮಾ ಮತ್ತು ಕೃಷ್ಣಾ ನದಿಗಳು ತುಂಬಿ ಹರಿಯುತ್ತಿರುವುದರಿಂದ ನದಿಪಾತ್ರದ ಜನರಲ್ಲಿ ಪ್ರವಾಹ ಭೀತಿ ಎದುರಾಗಿದೆ.