ಗೋಹತ್ಯೆ ನಿಷೇಧ ಕಾಯ್ದೆ ಅಂಗೀಕಾರ, ಕಲಬುರಗಿಯಲ್ಲಿ ಸಂಭ್ರಮ - ಕಲಬುರಗಿಯಲ್ಲಿ ಗೋ ಪೂಜೆ ಮೂಲಕ ಸಂಭ್ರಮ
ಕರ್ನಾಟಕ ಗೋಹತ್ಯೆ ನಿಯಂತ್ರಣ ಮತ್ತು ಜಾನುವಾರು ಸಂರಕ್ಷಣೆ ವಿಧೇಯಕ 2020ಕ್ಕೆ ವಿಧಾನಸಭೆಯಲ್ಲಿ ಅಂಗೀಕಾರ ದೊರೆತ ಹಿನ್ನೆಲೆ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗ ದಳದ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು. ನಗರದ ಎಸ್ವಿಪಿ ವೃತ್ತದಲ್ಲಿ ಗೋ ಪೂಜೆ ನಡೆಸಿ, ಸರ್ಕಾರದ ಪರ ಘೋಷಣೆ ಕೂಗುವ ಮೂಲಕ ಗೋ ಹತ್ಯೆ ನಿಷೇಧ ಕಾಯ್ದೆ ಸ್ವಾಗತಿಸಿದರು.