ಭಾರಿ ಮಳೆ- ಸಂತ್ರಸ್ತರಿಗೆ ಸಾಂತ್ವನ ಹೇಳಿದ್ರು ವೀರೇಂದ್ರ ಹೆಗ್ಗಡೆ - ಪುನರ್ವಸತಿ ಕೇಂದ್ರ
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ಭಾರಿ ಮಳೆಯಿಂದ ಸಂತ್ರಸ್ತರಾದ ಕುಟುಂಬಗಳಿಗೆ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಅವರು ಸಾಂತ್ವನ ಹೇಳಿದರು. ನೆರೆಯಿಂದ ಸಂತ್ರಸ್ತರಾದವರಿಗೆ ತೆರೆಯಲಾದ ಪುನರ್ವಸತಿ ಕೇಂದ್ರಗಳಿಗೆ ಭೇಟಿ ನೀಡಿ, ಧೈರ್ಯ ತುಂಬಿದರು. ಬೆಳ್ತಂಗಡಿ ತಾಲೂಕಿನ ಕಿಲ್ಲೂರು, ಕೊಲ್ಲಿ, ದಿಡುಪೆ, ಕುಕ್ಕಾವು, ಚಾರ್ಮಾಡಿ ಪುನರ್ವಸತಿ ಕೇಂದ್ರದಲ್ಲಿ ಸಂತ್ರಸ್ತರ ಸಂಕಷ್ಟ ಆಲಿಸಿದರು.