ಟ್ವೆಂಟಿ ಟ್ವೆಂಟಿ ಸಂಭ್ರಮ... ಕಡಲ ತೀರಗಳಲ್ಲಿ ಪ್ರವಾಸಿಗರು ಮೊಕ್ಕಾಂ! - preperation new year celeberation karawar
ಪ್ರವಾಸಿಗರ ಸ್ವರ್ಗ ಎಂದೇ ಕರೆಸಿಕೊಳ್ಳುವ ಉತ್ತರಕನ್ನಡ ಜಿಲ್ಲೆಯಲ್ಲಿ ಸದ್ಯ ಕಡಲ ತೀರಗಳು ಪ್ರವಾಸಿಗರಿಂದ ತುಂಬಿ ತುಳುಕುತ್ತಿವೆ. ಹೊಸ ವರ್ಷದ ಸಂಭ್ರಮಾಚರಣೆಗೆ ವಿವಿಧ ಕಡೆಗಳಿಂದ ಪ್ರವಾಸಿಗರ ದಂಡೇ ಹರಿದುಬರುತ್ತಿದೆ. ನೂತನ ವರ್ಷವನ್ನು ವಿಭಿನ್ನ ಮತ್ತು ವಿಶಿಷ್ಟ ಪೂರ್ಣವಾಗಿ ಆಚರಿಸಲು ಜನ ಕಾತರರಾಗಿದ್ದಾರೆ.