ದಾವಣಗೆರೆಯಲ್ಲಿ ಗಣೇಶನ ಅದ್ಧೂರಿ ಮೆರವಣಿಗೆ... ಡ್ರೋನ್ ಕ್ಯಾಮರಾದಲ್ಲಿ ದೃಶ್ಯಗಳ ಸೆರೆ
ದಾವಣಗೆರೆ ನಗರದ ಪ್ರಮುಖ ಬೀದಿಗಳಲ್ಲಿ ನಡೆದ ಮಹಾಗಣಪತಿಯ ಅದ್ಧೂರಿ ಮೆರವಣಿಗೆಯ ದೃಶ್ಯಗಳು ಡ್ರೋನ್ ಕ್ಯಾಮರಾದಲ್ಲಿ ಅದ್ಭುತವಾಗಿ ಸೆರೆಯಾಗಿವೆ. ನಗರದ ಹೈಸ್ಕೂಲ್ ಮೈದಾನದಿಂದ ಪ್ರಾರಂಭವಾಗಿದ್ದ ಮೆರವಣಿಗೆ ಎವಿಕೆ ರಸ್ತೆ, ಅಂಬೇಡ್ಕರ್ ವೃತ್ತ, ಜಯದೇವ ವೃತ್ತ, ಲಾಯರ್ ರಸ್ತೆ ಮೂಲಕ ಪಿಬಿ ರಸ್ತೆ ಉದ್ದಕ್ಕೂ ಅದ್ಧೂರಿಯಾಗಿ ಸಾಗಿತು. ಮೆರವಣಿಗೆಯುದ್ದಕ್ಕೂ ಯುವಕ-ಯುವತಿಯರು ಟಪ್ಪಾಂಗುಚಿ ಹಾಡುಗಳಿಗೆ ಕುಣಿದು ಕುಪ್ಪಳಿಸಿದರು. ವಿವಿಧ ಕಲಾ ತಂಡಗಳ ನೃತ್ಯ ಪ್ರದರ್ಶನ ಗಮನ ಸೆಳೆದವು. ಈ ಎಲ್ಲಾ ದೃಶ್ಯಗಳು ಡ್ರೋನ್ ಕ್ಯಾಮರಾದಲ್ಲಿ ಸೆರೆಯಾಗಿವೆ.