ಸಕ್ಕರೆನಾಡಲ್ಲಿ ಕೊರೊನಾ ನಿಯಮ ಉಲ್ಲಂಘನೆ: ಮಾರುಕಟ್ಟೆಯಲ್ಲಿ ಜನಜಂಗುಳಿ - Mandya Corona cases
ಮಂಡ್ಯ: ಸಕ್ಕರೆನಾಡು ಮಂಡ್ಯದಲ್ಲಿ ಅಗತ್ಯ ವಸ್ತುಗಳ ಖರೀದಿಗೆ ಜನರು ಮುಗಿಬಿದ್ದಿದ್ದು, ಕೋವಿಡ್ ನಿಯಮವನ್ನ ಗಾಳಿಗೆ ತೂರಿದ್ದಾರೆ. ಜೊತೆಗೆ ಪ್ರಮುಖ ರಸ್ತೆಗಳಲ್ಲಿ ವಾಹನ ಸಂಚಾರ ಮತ್ತಷ್ಟು ಹೆಚ್ಚಾಗಿದೆ. ಕೆಲ ದಿನಸಿ ಅಂಗಡಿ, ಸೂಪರ್ ಮಾರ್ಕೆಟ್ ಮುಂದೆ ಸರದಿ ಸಾಲಿನಲ್ಲಿ ನಿಂತು ಸಾಮಗ್ರಿಗಳನ್ನು ಖರೀದಿಸುತ್ತಿದ್ದಾರೆ. ನಾಳೆಯಿಂದ 14 ದಿನಗಳ ಕಾಲ ಲಾಕ್‌ಡೌನ್ ಇರುವ ಹಿನ್ನೆಲೆಯಲ್ಲಿ ಅಗತ್ಯ ವಸ್ತುಗಳ ಖರೀದಿಗಾಗಿ ಜನರು ಧಾವಿಸಿದ್ದಾರೆ. ಈ ಕುರಿತು 'ಈಟಿವಿ ಭಾರತ' ಪ್ರತಿನಿಧಿ ನಡೆಸಿರುವ ಗ್ರೌಂಡ್ ರಿಪೋರ್ಟ್ ಇಲ್ಲಿದೆ.