ಮಂಗಳೂರು ಪಾಲಿಕೆ ವತಿಯಿಂದ ತ್ಯಾಜ್ಯ ವಿಲೇವಾರಿ, ಕೊರೊನಾ ಜಾಗೃತಿ - ಮಂಗಳೂರು ಸುದ್ದಿ
ಗಾಂಧಿ ಜಯಂತಿ ಪ್ರಯುಕ್ತ ಮಂಗಳೂರು ಮಹಾನಗರ ಪಾಲಿಕೆ ಮೇಯರ್ ದಿವಾಕರ ಪಾಂಡೇಶ್ವರ ಹಾಗೂ ಆಯುಕ್ತ ಅಕ್ಷಯ್ ಶ್ರೀಧರ್ ನೇತೃತ್ವದಲ್ಲಿ ತ್ಯಾಜ್ಯ ವಿಲೇವಾರಿ ಹಾಗೂ ಕೊರೊನಾ ಜಾಗೃತಿ ಕಾರ್ಯಕ್ರಮ ನಡೆಯಿತು. ಮನೆ ಮನೆಗೆ ತೆರಳಿ ಹಸಿ ಹಾಗೂ ಒಣಕಸ ವಿಂಗಡಿಸಿ ತ್ಯಾಜ್ಯ ವಿಲೇವಾರಿ ಮಾಡುವುದು. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಜಾಗೃತಿ ಮೂಡಿಸಲಾಯಿತು. ಪಾಲಿಕೆ ವ್ಯಾಪ್ತಿಯ ಎಲ್ಲಾ 60 ವಾರ್ಡ್ಗಳಲ್ಲಿಯೂ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು.