ಇನ್ನೊಂದು ದಿನದಲ್ಲಿ ಹೇಮಾವತಿ ಜಲಾಶಯದಿಂದ ನಾಲೆಗಳಿಗೆ ನೀರು:ಮಾಧುಸ್ವಾಮಿ - Hemavati Nale
ತುಮಕೂರು: ರಾಜ್ಯದ ಮಲೆನಾಡಿನಲ್ಲಿ ಭರ್ಜರಿ ಮಳೆಯಾಗುತ್ತಿದ್ದು, ಹೇಮಾವತಿ ಜಲಾಶಯಕ್ಕೆ ಅಪಾರ ಪ್ರಮಾಣದ ನೀರು ಹರಿಯುತ್ತಿದೆ. ಜಿಲ್ಲೆಗೆ ಈ ಬಾರಿ ಕುಡಿಯುವ ನೀರಿನ ಸಮಸ್ಯೆ ಎದುರಾಗಲ್ಲ. ಜಲಾಶಯದಿಂದ ಇನ್ನೊಂದು ದಿನದಲ್ಲಿ ಜಿಲ್ಲೆಯ ಹೇಮಾವತಿ ನಾಲೆಗೆ ನೀರು ಹರಿಸಲು ನಿರ್ಧರಿಸಲಾಗಿದೆ ಎಂದು ಸಚಿವ ಜೆ.ಸಿ ಮಾಧುಸ್ವಾಮಿ ಹೇಳಿದ್ದಾರೆ.