ತುಂಗಭದ್ರಾ ಜಲಾಶಯದಿಂದ ನೀರು ಬಿಡುಗಡೆ: ಕಂಪ್ಲಿ-ಗಂಗಾವತಿ ಸೇತುವೆ ಮುಳುಗಡೆಗೆ ಒಂದೇ ಅಡಿ ಬಾಕಿ - flood
ಕೊಪ್ಪಳ ತಾಲೂಕಿನ ಮುನಿರಾಬಾದ್ನಲ್ಲಿರುವ ತುಂಗಭದ್ರಾ ಜಲಾಶಯದ ಒಳ ಹರಿವು ಮತ್ತೆ ಹೆಚ್ಚಾಗಿದ್ದು, ಜಲಾಶಯದ 32 ಗೇಟ್‌ಗಳ ಮೂಲಕ ಸುಮಾರು 80 ಸಾವಿರಕ್ಕೂ ಹೆಚ್ಚು ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗಿದೆ. ಇದ್ರಿಂದ ಗಂಗಾವತಿ ತಾಲೂಕಿನ ವಿರುಪಾಪುರಗಡ್ಡಿ ಸಂಪರ್ಕ ಕಡಿದುಕೊಂಡಿದೆ. ಇನ್ನು ಆನೆಗುಂದಿ ಬಳಿಯ ನವ ವೃಂದಾವನ ಜಲಾವೃತಗೊಂಡಿದೆ. ಚಿಕ್ಕ ಜಂತಕಲ್ ಬಳಿಯ ಕಂಪ್ಲಿ-ಗಂಗಾವತಿ ಸೇತುವೆ ಮುಳುಗಡೆಗೆ ಒಂದೇ ಅಡಿ ಬಾಕಿ ಉಳಿದಿದ್ದು, ಈಗಾಗಲೇ ನದಿ ಪಾತ್ರದ ಜನರಿಗೆ ಸುರಕ್ಷಿತ ಸ್ಥಳದಲ್ಲಿರುವಂತೆ ಮುನ್ನೆಚ್ಚರಿಕೆ ನೀಡಿದೆ.