ನಾರಾಯಣಪುರ ಅಣೆಕಟ್ಟೆಯಿಂದ ಕೃಷ್ಣಾ ನದಿಗೆ ನೀರು ಬಿಡುಗಡೆ - ನಾರಾಯಣಪುರ ಅಣೆಕಟ್ಟೆಯಿಂದ ಕೃಷ್ಣಾ ನದಿಗೆ ನೀರು ಬಿಡುಗಡೆ
ಲಿಂಗಸುಗೂರು: ಮಹಾರಾಷ್ಟ್ರದಲ್ಲಿ ನಿರೀಕ್ಷೆಗೂ ಮೀರಿ ಮಳೆಯಾಗಿರುವುದರಿಂದ ನಾರಾಯಣಪುರ ಅಣೆಕಟ್ಟೆಯಿಂದ ಕೃಷ್ಣಾ ನದಿಗೆ 1,84,670 ಕ್ಯೂಸೆಕ್ ನೀರು ಹರಿಬಿಡಲಾಗಿದೆ. ಜಲಾನಯನ ಪ್ರದೇಶದಲ್ಲಿ ಹೆಚ್ಚಿನ ಮಳೆ ಬೀಳುತ್ತಿದ್ದ ಕಾರಣ ಆಲಮಟ್ಟಿ ಜಲಾಶಯದಿಂದ ಒಂದು ಲಕ್ಷದ ಎಂಬತ್ತು ಸಾವಿರ ಕ್ಯೂಸೆಕ್ ನೀರು ಬಿಡಲಾಗಿದೆ. ಈ ಹಿನ್ನೆಲೆ ನಾರಾಯಣಪುರ ಅಣೆಕಟ್ಟೆಯ 14 ಕ್ರಸ್ಟ್ ಗೇಟ್ ಮೂಲಕ ನೀರು ಬಿಡುತ್ತಿರುವ ರುದ್ರ ರಮಣೀಯ ದೃಶ್ಯ ಎಲ್ಲರನ್ನ ಸೆಳೆಯುತ್ತಿದೆ. ಇಂದು ಮಧ್ಯಾಹ್ನ ಅಣೆಕಟ್ಟೆ ಸಾಮರ್ಥ್ಯ 492.252 ಮೀಟರ್ ಪೈಕಿ 491.420 ಮೀಟರ್ ಮಟ್ಟ ಕಾಯ್ದುಕೊಂಡು ನದಿಗೆ ನೀರು ಹರಿಬಿಡಲಾಗಿದೆ.