ಕರ್ನಾಟಕ

karnataka

ETV Bharat / videos

ದಾವಣಗೆರೆಯಲ್ಲಿ ಮಳೆಯ ಅವಾಂತರ: ಮನೆ, ಜಮೀನುಗಳಿಗೆ ನುಗ್ಗಿದ ನೀರು - Davanagere Rain News

By

Published : Jan 9, 2021, 12:19 PM IST

ದಾವಣಗೆರೆ: ಜಿಲ್ಲೆಯಲ್ಲಿ ನಿನ್ನೆ ಸುರಿದ ಭಾರಿ ಮಳೆಯು ಅವಾಂತರವನ್ನೇ ಸೃಷ್ಟಿಸಿದ್ದು, ಹಲವೆಡೆ ಮನೆ ಹಾಗೂ ಜಮೀನುಗಳಿಗೆ ನೀರು ನುಗ್ಗಿದೆ. ರಾಷ್ಟ್ರೀಯ ಹೆದ್ದಾರಿ 4ರ ಅವೈಜ್ಞಾನಿಕ ಕಾಮಗಾರಿಯಿಂದಾಗಿ ಹರಿಹರ ತಾಲೂಕಿನ ಹಲಬಾಳ ಗ್ರಾಮ ಹಲವು ಮನೆಗಳಿಗೆ ನೀರು ನುಗ್ಗಿದ್ದು, ನೀರು ಹೊರಹಾಕಲು ಗ್ರಾಮಸ್ಥರು ಹರಸಾಹಸ ಪಡಬೇಕಾಯಿತು. ರಸ್ತೆಯ ಪಕ್ಕದಲ್ಲಿ ಸಮರ್ಪವಾಗಿ ಚರಂಡಿ ಕಾಮಗಾರಿ ಮಾಡದಿರುವುದರಿಂದ ಹೊಲ-ಗದ್ದೆಗಳಿಗೂ ನೀರು ನುಗ್ಗಿದ್ದು, ಅನೇಕ ಬೆಳೆಗಳು ನಾಶವಾಗಿವೆ. ಇನ್ನು, ಮಳೆಗೆ ಹೂವಿನಮಡುವಿನ ಶಾಲೆಯ ಕಟ್ಟಡ ಕುಸಿದಿದ್ದು, ಶಾಲೆಗೆ ರಜೆ ಘೋಷಿಸಲಾಗಿದೆ. ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಕರೆ ಮಾಡಿದರೂ ಯಾರೂ ಕೂಡ ಸ್ಥಳಕ್ಕೆ ಭೇಟಿ ನೀಡಿಲ್ಲ. ಇದು‌ ಜನರ ಆಕ್ರೋಶಕ್ಕೆ ಕಾರಣವಾಗಿದೆ.

ABOUT THE AUTHOR

...view details