ವಿದೇಶಿಯರಿಗೆ ದಸರಾ ಅವ್ಯವಸ್ಥೆಯ ಕರಪತ್ರ ಹಂಚುತ್ತೇವೆ: ಮಾಜಿ ಮೇಯರ್ - mysore latest news
ಮೈಸೂರು: ದಸರಾ ಮಹೋತ್ಸವಕ್ಕೆ ಆಗಮಿಸುತ್ತಿರುವ ವಿದೇಶಿಗರಿಗೆ ಮೈಸೂರಿನ ಅವ್ಯವಸ್ಥೆಗಳ ಬಗ್ಗೆ ಕರಪತ್ರ ಹಂಚಿ ಅವರಿಗೆ ತಿಳಿಯುವಂತೆ ಮಾಡುತ್ತೇವೆ ಎಂದು ಮಾಜಿ ಮೇಯರ್ ಪುರುಷೋತ್ತಮ್ ಮಹಿಷ ದಸರಾ ಮಾಡಲು ಅವಕಾಶ ಮಾಡಿಕೊಡದಿದ್ದಕ್ಕೆ ಕಿಡಿಕಾರಿದ್ದಾರೆ. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಬರುವ ವಿದೇಶಿಗರಿಗೆ ಬರಿ ಲೈಟ್ ತೋರಿಸಿ ಸುಂದರ ನಗರಿ ಎಂದು ಬಿಂಬಿಸಿಕೊಳ್ಳುತ್ತಾರೆ. ಆದರೆ ವಾಸ್ತವವೇ ಬೇರೆ ಇದೆ. ಇದರ ಬಗ್ಗೆ ಇಂಗ್ಲಿಷ್ನಲ್ಲಿ ಕರಪತ್ರಗಳನ್ನು ಮುದ್ರಿಸಿ, ವಿದೇಶಿಯರಿಗೆ ಹಂಚುತ್ತೇವೆ ಎಂದು ದಸರಾ ಆಚರಣೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಿಗೆ ಈ ಮೂಲಕ ಎಚ್ಚರಿಕೆ ನೀಡಿದ್ದಾರೆ.