ಮಹಾಲಕ್ಷ್ಮಿ ಲೇಔಟ್ ಜೆಡಿಎಸ್ ಭದ್ರಕೋಟೆಯಾಗಿ ಮುಂದುವರೆಯಲಿದೆ: ಗಿರೀಶ್ ನಾಶಿ - ಮಹಾಲಕ್ಷ್ಮಿ ಲೇಔಟ್ ಲೆಟೆಸ್ಟ್ ನ್ಯೂಸ್
ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಮತ ಎಣಿಕೆ ಹಿನ್ನೆಲೆ ಮತ ಎಣಿಕೆ ಕೇಂದ್ರಕ್ಕೆ ಜೆಡಿಎಸ್ ಅಭ್ಯರ್ಥಿ ಗಿರೀಶ್ ನಾಶಿ ತಮ್ಮ ಬೆಂಬಲಿಗರೊಂದಿಗೆ ಆಗಮಿಸಿದ್ದು, ಗೆಲುವಿನ ವಿಶ್ವಾಸದಲ್ಲಿದ್ದಾರೆ. ಈಟಿವಿ ಭಾರತದೊಂದಿಗೆ ಮಾತನಾಡಿದ ಅವರು, ಮಹಾಲಕ್ಷ್ಮಿ ಲೇಔಟ್ ಜೆಡಿಎಸ್ ಭದ್ರಕೋಟೆಯಾಗಿದೆ. ಇದು ಹಾಗೆಯೇ ಮುಂದುವರೆಯಲಿದೆ. ತಮ್ಮ ಕಾರ್ಯಕರ್ತರು ಪಟ್ಟಿರುವ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿ ಎಂದು ವಿಶ್ವಾಸ ವ್ಯಕ್ತಪಡಿಸಿದರು.