ವೀಕೆಂಡ್ ಕರ್ಫ್ಯೂಗೆ ಉತ್ತಮ ಪ್ರತಿಕ್ರಿಯೆ.. ಎಲ್ಲವೂ ಇಲ್ಲಿ ಮೌನಂ ಶರಣಂ ಗಚ್ಚಾಮಿ! - ಮಂಡ್ಯ ಕೋವಿಡ್ ಪ್ರಕರಣ
ಮಂಡ್ಯ: ವೀಕೆಂಡ್ ಕರ್ಫ್ಯೂ ಹಿನ್ನೆಲೆ ಸಕ್ಕರೆ ನಾಡು ಸಂಪೂರ್ಣ ಸ್ತಬ್ಧವಾಗಿದೆ. ಸರ್ಕಾರದ ಮಾರ್ಗಸೂಚಿಯಂತೆ ಬೆಳಗ್ಗೆ 6 ಗಂಟೆಯಿಂದ 10 ಗಂಟೆಯವರೆಗೆ ಅಗತ್ಯ ವಸ್ತುಗಳಾದ ಹಾಲು, ತರಕಾರಿ, ಕಿರಾಣಿ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಲಾಗಿತ್ತು, ಉಳಿದಂತೆ ಎಲ್ಲ ಅಂಗಡಿ ಮುಂಗಟ್ಟುಗಳು ಬಂದ್ ಆಗಿದ್ದವು. ತುರ್ತು ಅಗತ್ಯ ಇರುವ ಜನ ಮಾತ್ರ ರಸ್ತೆಗಿಳಿದಿದ್ದು, ಎಲ್ಲರೂ ಮಾಸ್ಕ್ ಧರಿಸಿ ನಿಯಮ ಪಾಲನೆ ಮಾಡುತ್ತಿರುವುದು ಕಂಡು ಬಂತು.