ಕರ್ನಾಟಕ

karnataka

ETV Bharat / videos

ವೀಕೆಂಡ್ ಕರ್ಪ್ಯೂಗೆ ಮಂಗಳೂರಿನಲ್ಲಿ ಉತ್ತಮ ಪ್ರತಿಕ್ರಿಯೆ.. ನಗರದಲ್ಲಿ ಬಂದ್ ವಾತಾವರಣ - ಕೋವಿಡ್ -19

By

Published : Apr 24, 2021, 12:32 PM IST

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾದ್ಯಂತ ವೀಕೆಂಡ್ ಕರ್ಫ್ಯೂಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಜಿಲ್ಲಾದ್ಯಂತ ಬಂದ್ ವಾತಾವರಣ ನಿರ್ಮಾಣವಾಗಿದೆ. ಮಂಗಳೂರು ನಗರದಲ್ಲಿ ಅಲ್ಲಲ್ಲಿ ರಸ್ತೆಗೆ ಬ್ಯಾರಿಕೇಡ್​ ಅಳವಡಿಸಲಾಗಿದ್ದು, ವಾಹನಗಳನ್ನು ತಪಾಸಣೆ ನಡೆಸಿ ಬಿಡಲಾಗುತ್ತಿದೆ. ಅನಗತ್ಯವಾಗಿ ತಿರುಗಾಡುವವರನ್ನು ವಾಪಸ್​ ಮನೆಗೆ ಕಳುಹಿಸಲಾಗುತ್ತಿದೆ. ಕೆಲ ಪ್ರಯಾಣಿಕರೊಂದಿಗೆ ಸರ್ಕಾರಿ ಬಸ್​ಗಳು ಸಂಚರಿಸುತ್ತಿವೆ. ಬೆಳಗ್ಗೆ 10 ಗಂಟೆಯವರೆಗೆ ಅಗತ್ಯ ವಸ್ತುಗಳನ್ನು ಖರೀದಿಸಲು ಅವಕಾಶ ನೀಡಲಾಗಿತ್ತು. ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಬಂದೋಬಸ್ತ್ ಪರಿಶೀಲನೆ ನಡೆಸಿದರು.

ABOUT THE AUTHOR

...view details