ಕರ್ನಾಟಕ

karnataka

ETV Bharat / videos

ವೀಕೆಂಡ್​ ಕರ್ಫ್ಯೂ... ಶಿವಮೊಗ್ಗ ಜನತೆಯಿಂದ ಉತ್ತಮ ಪ್ರತಿಕ್ರಿಯೆ - shimogga weekend curfew

By

Published : Apr 25, 2021, 12:56 PM IST

ಶಿವಮೊಗ್ಗ: ಸಿಎಂ ತವರು ಜಿಲ್ಲೆ ಶಿವಮೊಗ್ಗದಲ್ಲಿ ಕೊರೊನಾ ನಿಯಂತ್ರಣಕ್ಕೆ ವಿಧಿಸಿರುವ ವಿಕೇಂಡ್ ಕರ್ಫ್ಯೂಗೆ ಎರಡನೇ ದಿನವೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕೋವಿಡ್​​ ಎರಡನೇ ಅಲೆ ಹೆಚ್ಚಾಗುತ್ತಿರುವ ಹಿನ್ನೆಲೆ ರಾಜ್ಯ ಸರ್ಕಾರ ವಿಕೇಂಡ್ ಕರ್ಫ್ಯೂ ಜಾರಿ ಮಾಡಿ ಆದೇಶ ಹೊರಡಿಸಿದೆ. ಹಾಗಾಗಿ ನಗರದ ಪ್ರಮುಖ ವೃತ್ತಗಳಲ್ಲಿ ಬ್ಯಾರಿಕೇಡ್​​ಗಳನ್ನು ಹಾಕಿ ಪೊಲೀಸರು ಅನಗತ್ಯವಾಗಿ ಓಡಾಡುವ ವಾಹನ ಸವಾರರಿಗೆ ಜಾಗೃತಿ ಮೂಡಿಸುತ್ತಿದ್ದಾರೆ. ಮುಂಜಾನೆ ಅಗತ್ಯ ವಸ್ತುಗಳನ್ನು ಕೊಳ್ಳಲು ಕೆಲ ಮಾರುಕಟ್ಟೆಗೆ ಜನ ಮುಗಿಬಿದ್ದಿದ್ದರು. ನಂತರ ಶಿವಮೊಗ್ಗ ಸಂಪೂರ್ಣ ಸ್ತಬ್ಧವಾಗಿದೆ. ಈ ಕುರಿತು ನಮ್ಮ ಪ್ರತಿನಿಧಿ ನೀಡಿರುವ ಪ್ರತ್ಯಕ್ಷ್ಯ ವರದಿ ಇಲ್ಲಿದೆ.

ABOUT THE AUTHOR

...view details