ಕಾಡಾನೆಗಳ ದಾಳಿಗೆ ಬೆದರಿದ ರೈತರು; ಕಾರ್ಯಾಚರಣೆಗಿಳಿದ ಅಧಿಕಾರಿಗಳು - wild elephants news
ಅರಣ್ಯ ಪ್ರದೇಶದ ಅಂಚಿನಲ್ಲಿರುವ ಗ್ರಾಮಗಳಿಗೆ ಕಾಡಾನೆಗಳ ಹಿಂಡು ದಾಳಿ ಮಾಡಿ ಆತಂಕ ಸೃಷ್ಟಿಸಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಶಿಂಷಾಪುರ, ಬ್ಲಪ್ ಬಳಿ ನಡೆದಿದೆ. ಸುಮಾರು 10ಕ್ಕೂ ಹೆಚ್ಚು ಕಾಡಾನೆಗಳು ಮರಿಗಳ ಜೊತೆ ರೈತರ ಜಮೀನುಗಳ ಮೇಲೆ ದಾಳಿ ಮಾಡುತ್ತಿದ್ದು, ಬೆಳೆಗಳನ್ನು ನಾಶ ಮಾಡುತ್ತಿವೆ. ಅರಣ್ಯ ಇಲಾಖೆ ಅಧಿಕಾರಿಗಳು ಆನೆಗಳನ್ನು ಓಡಿಸಲು ಸಾಹಸ ಪಡುತ್ತಿದ್ದಾರೆ. ಮರಿಗಳ ಜೊತೆ ದಾಳಿ ಮಾಡಿರುವುದರಿಂದ ಎಚ್ಚರಿಕೆಯಿಂದ ಕಾರ್ಯಾಚರಣೆ ಮಾಡಲಾಗುತ್ತಿದೆ. ಸ್ಥಳೀಯ ರೈತರು ಸಹ ಅಧಿಕಾರಿಗಳ ಸಹಾಯಕ್ಕೆ ನಿಂತಿದ್ದಾರೆ.