ಮೈಕ್ರೋ ಫೈನಾನ್ಸ್ ಸಂಸ್ಥೆಗಳ ವಿರುದ್ಧ ಮಹಿಳೆಯರ ಪ್ರತಿಭಟನೆ: ವಿಡಿಯೋ - latest mandya news
ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಮಹಿಳೆಯರಿಗೆ ಕಿರುಕುಳ ನೀಡುತ್ತಿವೆ. ಇಂತಹ ಸಂಸ್ಥೆಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಜನವಾದಿ ಮಹಿಳಾ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಿದ ಮಹಿಳೆಯರು, ಮೈಕ್ರೋ ಫೈನಾನ್ಸ್ ಹಾಗೂ ಬ್ಯಾಂಕುಗಳು ಮಹಿಳಾ ಸ್ವ ಸಹಾಯ ಸಂಘಗಳಿಗೆ ನೀಡಿರುವ ಸಾಲ ಮನ್ನಾ ಮಾಡಬೇಕು. ಸಾಲ ವಸೂಲಾತಿ ನಿಲ್ಲಿಸಬೇಕು, ಹೊಸ ಸಾಲ ವಿತರಣೆ ಮಾಡಬೇಕು ಎಂದು ಒತ್ತಾಯಿಸಿದರು.