ಟಾಟಾ ಏಸ್ ಪಲ್ಟಿ: ಕೂಲಿ ಕಾರ್ಮಿಕರಿಗೆ ಗಾಯ - ರಾಯಚೂರು
ರಾಯಚೂರು: ಕೂಲಿ ಕಾರ್ಮಿಕರನ್ನ ಕರೆದುಕೊಂಡು ಬರುತ್ತಿದ್ದ ಟಾಟಾ ಏಸ್ ವಾಹನ ಪಲ್ಪಿಯಾಗಿ 25ಕ್ಕೂ ಹೆಚ್ಚು ಕೂಲಿ ಕಾರ್ಮಿಕರು ಗಾಯಗೊಂಡಿರುವ ಘಟನೆ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಗಣದಿನ್ನಿ ಗ್ರಾಮದ ಬಳಿ ನಡೆದಿದೆ. ನರೇಗಾ ಯೋಜನೆಯಡಿ ಕೂಲಿ ಕಾರ್ಮಿಕರು ಕೆಲಸಕ್ಕಾಗಿ ಗಣದಿನ್ನಿ ಗ್ರಾಮದ ಮೂರು ಕಿಲೋ ಮೀಟರ್ ದೂರದಲ್ಲಿರುವ ಕೆಲಸಕ್ಕೆ ತೆರಳಿದ್ರು. ಕೆಲಸ ಮುಗಿಸಿಕೊಂಡು ವಾಪಸ್ ಟಾಟಾ ಏಸ್ ವಾಹನದಲ್ಲಿ ಗ್ರಾಮಕ್ಕೆ ಬರುತ್ತಿದ್ರು. ಈ ವೇಳೆ, ವಾಹನ ಪಲ್ಪಿಯಾಗಿದೆ. ಪರಿಣಾಮ ವಾಹನದಲ್ಲಿ ಐವರು ಕೂಲಿ ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದರೆ, ಇನ್ನುಳಿದ ಕಾರ್ಮಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಗಾಯಗೊಂಡರನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.