ವಿಶ್ವ ಪ್ರವಾಸೋದ್ಯಮ ದಿನ ಆಚರಣೆ.. ಪ್ರವಾಸಿ ತಾಣಗಳ ಅಭಿವೃದ್ಧಿಗೆ ಚಿಂತನೆ - kalaburgi latest news
ಕಲಬುರಗಿಯಲ್ಲಿ ಜಿಲ್ಲಾಡಳಿತ,ಇನ್ ಟ್ಯಾಕ್ ಹಾಗೂ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಇಲ್ಲಿನ ಸರ್ಕಾರಿ ಮಹಿಳಾ ಪದವಿ ಮಹಾವಿದ್ಯಾಲಯದಲ್ಲಿ ವಿಶ್ವ ಪ್ರವಾಸೋದ್ಯಮ ದಿನ ಆಚರಿಸಲಾಯಿತು. ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಸುವರ್ಣ ಮಾಲಾಜಿ ಚಾಲನೆ ನೀಡಿದರು. ಜಿಲ್ಲೆ ಸೇರಿ ರಾಜ್ಯದ ವಿವಿಧ ಪ್ರವಾಸಿ ತಾಣಗಳ ಅಭಿವೃದ್ಧಿಯ ಕುರಿತು ಅವಲೋಕನ ನಡೆಸಲಾಯಿತು. ಪ್ರವಾಸೋದ್ಯಮದಲ್ಲಿ ಉದ್ಯೋಗಾವಕಾಶಗಳ ಕುರಿತು ಚರ್ಚಿಸಲಾಯಿತು. ಪ್ರವಾಸೋದ್ಯಮ ಇಲಾಖೆ ಉಪ ನಿರ್ದೆಶಕ ರಫೀಕ್ ಲಾಡಜಿ ಇದ್ದರು.